ಮುಂಬೈ/ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಇಂದು (ಬುಧವಾರ) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಅವರ ಖಾಸಗಿ ‘ಲಿಯರ್ಜೆಟ್ 45’ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ. ಈ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಪೈಲಟ್ ಹಾಗೂ ಸಿಬ್ಬಂದಿ ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಡಿಜಿಸಿಎ (DGCA) ಅಧಿಕಾರಿಗಳು ದೃಢಪಡಿಸಿದ್ದಾರೆ.

