ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ (ರಿ) ಅರಂತೋಡು ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಅಂಗವಾಗಿ ಎಸ್.ಕೆ.ಸ್.ಎಸ್.ಎಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷರಾಗಿ ಆಯ್ಕೆಯಾದ ಸಂಶುದ್ಧೀನ್ ಕ್ಯೂರ್ ರವರನ್ನು ಅರಂತೋಡು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಶಾಲು ಹೊದಿಸಿ ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಅಮೀರ್ ಕುಕ್ಕುಂಬಳ ಅಧ್ಯಕ್ಷತೆ ವಹಿಸಿದರು. ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಕಾರ್ಯಧ್ಯಕ್ಷ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್ ಪ್ರಧಾನ ಕಾರ್ಯದರ್ಶಿ ಪಸೀಲು, ಜಮಾಅತ್ ಕಾರ್ಯದರ್ಶಿ ಕೆ.ಎಂ ಮೂಸಾನ್, ಎ.ಹನೀಫ್, ಟಿ.ಎಂ ಜಾವೇದ್ ತೆಕ್ಕಿಲ್ ಹಾಜಿ ಅಝಾರುದ್ದೀನ್, ಮುಜೀಬ್, ಆಶಿಕ್ ಕುಕ್ಕುಂಬಳ, ಮೊಹಮ್ಮದ್ ನವಾಝ್, ಆಫಿಝ್ ಕೊಡಂಕೇರಿ ಮೊದಲಾದವರು ಉಪಸ್ಥಿತರಿದ್ದರು.
