
ಮಂಗಳೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ (ದಕ್ಷಿಣ ಕನ್ನಡ – ಮಂಗಳೂರು) ವತಿಯಿಂದ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಈ ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣವೇ ಅನ್ವಯಿಸಿ ಆದೇಶ ಹೊರಡಿಸಬೇಕೆಂದು ಹಾಗೂ
ಎನ್‌ಹೆಚ್‌ಎಂ ಕಾರ್ಯಕ್ರಮದಡಿ ಸೇವೆಗೆ ಹಾಜರಾಗುವ ಮುನ್ನ ಇಪಿಎಫ್ (EPF) ಸೌಲಭ್ಯ ಹೊಂದಿದ್ದ ಎಲ್ಲಾ ನೌಕರರಿಗೆ, ಕಾರ್ಮಿಕ ಭವಿಷ್ಯ ನಿಧಿ ಸಂಸ್ಥೆಯ ಪ್ರಾದೇಶಿಕ ಇಪಿಎಫ್ ಆಯುಕ್ತರ ನಿರ್ದೇಶನದನ್ವಯ ಅದೇ ಸೌಲಭ್ಯವನ್ನು ಎನ್‌ಹೆಚ್‌ಎಂ ಅಡಿಯಲ್ಲೂ ಮುಂದುವರಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಈ ಎರಡೂ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕೆಂದು ಸಂಘದ ಸಂಚಾಲಕರಾ ಲೋಕೇಶ್ ತಂಟೆಪ್ಪಾಡಿಯವರು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಶ್ರೀ ಟಿ. ಎಮ್. ಶಹೀದ್ ತೆಕ್ಕಿಲ್ ಅವರಿಗೆ ಮನವಿ ಸಲ್ಲಿಸಿದರು.







