ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಸಲ್ಮಾನ್ ಎಂದು ಗುರುತಿಸಲಾಗಿದೆ.

ಘಟನೆಯ ವಿವರ:
ಸಲ್ಮಾನ್ ಅವರು ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ (barrier) ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸಲ್ಮಾನ್ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು. ಬೈಕ್ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಸಲ್ಮಾನ್ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.







