ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ- ಸದಾನಂದ‌ ಮಾವಜಿ

ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ

    ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ.
    ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ನಡೆದ‌ ಅರೆಭಾಷೆ ರಂಗ್ -2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರೆಭಾಷೆ ಅಕಾಡೆಮಿಯ ವತಿಯಿಂದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು.

    ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌‌ನ ಉಪಾಧ್ಯಕ್ಷೆ
    ಶೋಭಾ ಚಿದಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ ಇಂತಹ ಕಾರ್ಯಕ್ರಮಗಳ ಮೂಲಕ ಭಾಷೆಯ ಉಳಿವಿನೊಂದಿಗೆ ಸಂಸ್ಕೃತಿಯ ಉಳಿವು ಕೂಡ ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ., ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,
    ಅರೆಭಾಷೆ ಅಕಾಡಮಿ ಸದಸ್ಯರಾದ
    ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ,
    ಡಾ.ಎನ್.ಎ.ಜ್ಞಾನೇಶ್
    ಲೋಕೇಶ್ ಊರುಬೈಲು,
    ಗೋಪಾಲ ಪೆರಾಜೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಚಾಲಕಿ
    ಡಾ.ಮಮತಾ.ಕೆ, ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ.ಅನುರಾಧಾ ಕುರುಂಜಿ, ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕ ಕುಲದೀಪ್ ಪೆಲ್ತಡ್ಕ, ಸಂಘದ ಅಧ್ಯಕ್ಷೆ ಹವ್ಯಶ್ರೀ ಕೆ.ಎಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಚಲನ ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕ ಕುಲದೀಪ್ ಪೆಲ್ತಡ್ಕ ಸ್ವಾಗತಿಸಿ, ಸಂಘದ ಅಧ್ಯಕ್ಷೆ
    ಹವ್ಯಶ್ರೀ ಕೆ.ಎಸ್.ವಂದಿಸಿದರು.
    ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.
    ಬಳಿಕ ಭಾಷೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಹಾಳೆಯಲ್ಲಿ ಕುಳಿತು ಎಳೆಯುವ ಸ್ಪರ್ಧೆ ಎಲ್ಲರ ಗಮನ ಸೆಳೆಯಿತು.

    Leave a Reply

    Your email address will not be published. Required fields are marked *