ಪಶ್ಚಿಮ ಬಂಗಾಳ: ಟೀಮ್ ಇಂಡಿಯಾದ ಮಾಜಿ ವೇಗದ ಬೌಲರ್ ಹಾಗೂ ಭಾರತೀಯ ಜನತಾ ಪಕ್ಷದ (BJP) ಅಭ್ಯರ್ಥಿ ಅಶೋಕ್ ದಿಂಡಾ ಅವರು 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮೊಯ್ನಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸತತ ಎರಡನೇ ಬಾರಿಗೆ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ 42 ವರ್ಷದ ದಿಂಡಾ, ತಮ್ಮ ಸಮೀಪದ ಪ್ರತಿಸ್ಪರ್ಧಿ ತೃಣಮೂಲ ಕಾಂಗ್ರೆಸ್ನ (TMC) ಚಂದನ್ ಮಂಡಲ್ ಅವರನ್ನು 16,241 ಮತಗಳ ಅಂತರದಿಂದ ಮಣಿಸಿದ್ದಾರೆ. 2021 ರ ಚುನಾವಣೆಯಲ್ಲೂ ಇದೇ ಕ್ಷೇತ್ರದಿಂದ ಅವರು ಗೆಲುವು ಕಂಡಿದ್ದರು.
ಒಂದು ಕಾಲದಲ್ಲಿ ಕ್ರಿಕೆಟ್ ಪಿಚ್ನಲ್ಲಿ ತಮ್ಮ ವೇಗದ ಬೌಲಿಂಗ್ಗೆ ಹೆಸರುವಾಸಿಯಾಗಿದ್ದ ಅಶೋಕ್ ದಿಂಡಾ, ಇದೀಗ ರಾಜಕೀಯ ಅಖಾಡದಲ್ಲೂ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಅವರ ಈ ಗೆಲುವು ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮೂಡಿಸಿದೆ.






