ಅರಂತೋಡು ಜಮಾಅತ್ ವತಿಯಿಂದ ಉಮ್ರಾ ಯಾತ್ರಾರ್ಥಿ ಮನ್ಸೂರ್ ಪಾರೆಕ್ಕಲ್ ಗೆ ಬೀಳ್ಕೊಡುಗೆ

ಅರಂತೋಡು ಬದ್ರಿಯಾ ಜಮಾಅತ್ ಸಮಿತಿಯ ನಿರ್ದೇಶಕರಾದ ಮನ್ಸೂರ್ ಪಾರೆಕ್ಕಲ್ ರವರು ಪವಿತ್ರ ಮಕ್ಕಾಕ್ಕೆ ಉಮ್ರಾ ಯಾತ್ರೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಮತ್ತು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ ವತಿಯಿಂದ ಸೆ.4 ರಂದು ಬೀಳ್ಕೊಡಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ದುವಾವನ್ನು ಖತೀಬರಾದ ಬಹು| ಆಸಿಫ್ ಅಝ್ ಹರಿ ನೆರವೇರಿಸಿದರು. ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವದರ್ಜೆ ) ಟಿ.ಎಂ ಶಹೀದ್ ತೆಕ್ಕಿಲ್ ಮನ್ಸೂರ್ […]

Read More

ತೆಕ್ಕಿಲ್: ಕೃಷಿ ಸಚಿವ ನರೇಂದ್ರ‌ಸ್ವಾಮಿ ಅವರಿಗೆ ಸ್ವಾಗತ ಸನ್ಮಾನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಎನ್. ನರೇಂದ್ರ‌ಸ್ವಾಮಿ ಅವರು ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಮಾರ್ಗಮಧ್ಯೆ ತೆಕ್ಕಿಲ್ ಬಳಿ ಆಗಮಿಸಿದಾಗ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೆಡಿಬಿ ಸದಸ್ಯರಾದ ಅಶ್ರಫ್ ಗುಂಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ.

ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ– ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ). ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದಿನಾಂಕ 03/09/2026 ರಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು […]

Read More

ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕಿಗೆ ಜಿಲ್ಲಾ ಮಟ್ಟದ ಗೌರವ

ಸಾಮೆತ್ತಡ್ಕ ಶಾಲೆಯ ಮರಿಯಾ ಅಶ್ರಫ್ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವ ಕೆಲಸವಲ್ಲ; ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಭವಿಷ್ಯದತ್ತ ಮುನ್ನಡೆಸುವ ಜವಾಬ್ದಾರಿಯೂ ಹೌದು. ಈ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸುತ್ತಾ ಬಂದಿರುವ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಮರಿಯಾ ಅಶ್ರಫ್ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ಸಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ, ಪರಿಣಾಮಕಾರಿ […]

Read More

ಬೆಂಗಳೂರು: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸುಳ್ಯದ ಅಭಿವೃದ್ಧಿ ಬಗ್ಗೆ ಟಿ.ಎಂ. ಶಹೀದ್ ತೆಕ್ಕಿಲ್ ಚರ್ಚೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ನಿವಾಸದಲ್ಲಿ ವಿಶೇಷ ಔತಣಕೂಟ ನಿನ್ನೆ ರಾತ್ರಿ ನಡೆಯಿತುಈ ಔತಣ ಕೂಟದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಉಪಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗರೆಡ್ಡಿ, ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಚಿವ ಪಿ. ರಘುಮೂರ್ತಿ, ವಿಧಾನ […]

Read More

ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕ ಸಾ*ವು

ಕಾಸರಗೋಡು: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಡಿಕೈ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ಸಾಯಂಕಾಲ ಸಂಭವಿಸಿದೆ. ಮಡಿಕೈ ಮೂನ್ನುರೋಡ್‌ನ ರಾಜೇಶ್ ಮತ್ತು ನೀತು ದಂಪತಿಯ ಏಕೈಕ ಪುತ್ರ ಅನೇಕ್ (11) ಮೃತಪಟ್ಟ ಬಾಲಕ. ಈತ ಕಾಂಞಿರಪೊಯಿಲ್ ಸರ್ಕಾರಿ ಪ್ರೌಢಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಘಟನೆಯ ವಿವರ: ಗುರುವಾರ ಸಂಜೆ ಶಾಲೆ ಮುಗಿಸಿ ಬಂದಿದ್ದ ಅನೇಕ್, ಮನೆ ಸಮೀಪದ ನಂದನ್‌ಕುಳಿ ಅಂಗನವಾಡಿ ಅಂಗಳಕ್ಕೆ ಆಟವಾಡಲು ತೆರಳಿದ್ದನು. […]

Read More

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ ಬಂಟ್ವಾಳ, ಸೆ. 2: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ […]

Read More

ಹನೂರು ಅಮಾನವೀಯ ಕೃತ್ಯ: ಟಿ.ಎಂ. ಶಾಹಿದ್ ತೆಕ್ಕಿಲ್ ತ್ವರಿತ ಕಾರ್ಯಾಚರಣೆಗೆ ಒಲಿದ ನ್ಯಾಯ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಮಿಕರಿಗೆ ಆಸರೆ

ಚಾಮರಾಜನಗರ: ಹನೂರಿನಲ್ಲಿ ಕನಿಷ್ಠ ವೇತನ ನೀಡದೆ ಅನ್ಯಾಯಕ್ಕೊಳಗಾಗಿದ್ದ ಬಡ ಕಾರ್ಮಿಕರಿಗೆ ಕಷ್ಟದಿಂದ ಮುಕ್ತಿ ದೊರಕಿದ್ದು, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ತ್ವರಿತ ಹಾಗೂ ಕಟ್ಟುನಿಟ್ಟಿನ ಮಧ್ಯಪ್ರವೇಶದಿಂದಾಗಿ ಕಾರ್ಮಿಕರಿಗೆ ಒಂದೇ ರಾತ್ರಿಯಲ್ಲಿ ಪೂರ್ಣ ನ್ಯಾಯ ಸಿಕ್ಕಿದೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಕ್ಷಣ ಸ್ಪಂದಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು, ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ […]

Read More

ಕಾರ್ಮಿಕರ ಶೋಷಣೆ ತಡೆಯಲು ಕೊಳ್ಳೇಗಾಲದಲ್ಲಿ ಹೈಅಲರ್ಟ್

ಪ್ರತಿ ಗ್ರಾಮ, ವಾರ್ಡ್ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ರಚನೆಗೆ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಸೂಚನೆ ಕೊಳ್ಳೇಗಾಲ: ಕಾರ್ಮಿಕರ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ನಿನ್ನೆ ಚಾಮರಾಜನಗರದ ಹನೂರಿನಲ್ಲಿ ಕಾರ್ಮಿಕರ ಸ್ಥಿತಿಗತಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಿದ ನಂತರ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ ಶಾಹೀದ್ ತೆಕ್ಕಿಲ್ ಅವರು ಕೊಳ್ಳೇಗಾಲಕ್ಕೆ ಭೇಟಿ ನೀಡಿ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.ಹನೂರಿನಲ್ಲಿ ಕಂಡುಬಂದ ಕನಿಷ್ಠ ವೇತನ ಉಲ್ಲಂಘನೆಯಂತಹ ಪ್ರಕರಣಗಳು […]

Read More

ಎಡಮಂಗಲ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯ ಗ್ರಾಮ ಸಹಾಯಕ ಆತ್ಮಹತ್ಯೆಗೆ ಶರಣು

ಎಡಮಂಗಲ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ ಎಂಬವರು ಎಡಮಂಗಲದ ಪುಳಿಕುಕ್ಕು ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದೀಪಕ್ ಅವರು ಪುಳಿಕುಕ್ಕು ಬಳಿಯ ತಮ್ಮ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅವರ ಪತ್ನಿ ಕಡಬದಲ್ಲಿರುವ ತಾಯಿ ಮನೆಗೆ ತೆರಳಿದ್ದರೆನ್ನಲಾಗಿದೆ. ಮೃತರು ಪತ್ನಿ, ಮಗಳು ಹಾಗೂ ಸಹೋದರರನ್ನು ಅಗಲಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆಗೆ […]

Read More