ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೇರಮಜಲು, ಕೊಡ್ಮಾಣ್, ಪುದು ಹಾಗೂ ಮುಂಡೆ ಗ್ರಾಮಗಳ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಆಶ್ರಯದಲ್ಲಿ ‘ಗ್ಯಾರಂಟಿ ಉತ್ಸವ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.
ನವೆಂಬರ್ 01, 2026 ರಂದು ಆದಿತ್ಯವಾರ ಕೊಡ್ಮಾಣ್ ಕಲಾ ವಲಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಮತ್ತು ಸರ್ಕಾರದ ಜನಪರ ಸೌಲಭ್ಯಗಳು ಕಟ್ಟಕಡೆಯ ಅರ್ಹ ಫಲಾನುಭವಿಗಳಿಗೂ ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಸನ್ಮಾನ್ಯ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಇದರ ಅಧ್ಯಕ್ಷ (ಸಚಿವ ದರ್ಜೆ)ಟಿ.ಎಂ. ಶಾಹೀದ್ ತೆಕ್ಕಿಲ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತ ಡಿ. ಎಸ್ ಗಟ್ಟಿ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು, ಸಮಿತಿಯ ಪ್ರಮುಖ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು. .
