ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದಿನಾಂಕ 21, 2026ರಂದು ಮಹಾನ್ ಸಮಾಜ ಸುಧಾರಕ ಬಸವಣ್ಣ ಅವರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಅವರು ವಹಿಸಿ ಬಸವಣ್ಣನವರ ಆದರ್ಶಗಳನ್ನು ಪಾಲನೆ ಮಾಡುವಂತೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮಮತಾ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗೂ IQAC ಸಂಚಾಲಕರು, ಬಸವಣ್ಣನವರ ಜೀವನ ತತ್ವಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಸಂದೇಶಗಳ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ಅವರ ಚಿಂತನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀಮತಿ ರತ್ನಾವತಿ ಡಿ. ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಶ್ರೀಲಯ ಅಂತಿಮ ಬಿ.ಎ ಪ್ರಾರ್ಥಿಸಿದರು. ದೀಕ್ಷಿತ ಜಿ. ಆಚಾರ್ ಅಂತಿಮ ಬಿಕಾಂ ಸ್ವಾಗತಿಸಿ, ಮೇಘನಾ ಅಂತಿಮ ಬಿಕಾಂ ವಂದಿಸಿದರು. ಪ್ರೀಕ್ಷ ದ್ವಿತೀಯ ಬಿ.ಎಸ್ಸಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ, ಬೋಧಕೇತರ ವೃಂದ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *