ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ನಿವಾಸದಲ್ಲಿ ವಿಶೇಷ ಔತಣಕೂಟ ನಿನ್ನೆ ರಾತ್ರಿ ನಡೆಯಿತು
ಈ ಔತಣ ಕೂಟದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಉಪಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗರೆಡ್ಡಿ, ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಚಿವ ಪಿ. ರಘುಮೂರ್ತಿ, ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಸೈಯದ್ ನಾಸೀರ್ ಹುಸೇನ್, ನಗರಾಭಿವೃದ್ಧಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ, ಪೌರಾಡಳಿತ ಇಲಾಖೆ ಸಚಿವ ಹೆಚ್.ಸಿ ಬಾಲಕೃಷ್ಣ, ಆಹಾರ ಮತ್ತು ನಾಗರಿಕ ಪೂರೈಕೆ ಶಾಸಕ ರಿಜ್ವಾನ್ ಅರ್ಷದ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವ ದರ್ಜೆ) ಟಿ.ಎಂ. ಶಹೀದ್ ತೆಕ್ಕಿಲ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸಹಿತ ಹಲವು ಹಿರಿಯ ಅಧಿಕಾರಿಗಳು ಮಾಜಿ ಸಚಿವರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಬರುವ ಸೆಪ್ಟೆಂಬರ್ 18 ರಂದು ನಡೆಯಲಿರುವ ಸಚಿವ ಸಂಪುಟ ಸಭೆ ಬಗ್ಗೆ ಸಚಿವರ ಗಮನ ಸೆಳೆದ
ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಸುಳ್ಯದ ಕೃಷಿ ವಿಚಾರಗಳಾದ ರಬ್ಬರ್ ಉತ್ಪಾದನಾ ಘಟಕ (Rubber Production Plant), ಅಡಿಕೆ, ತೆಂಗು, ಕೊಕೊ ಬೆಳೆಗಾರರ ವಿಷಯಗಳು ಹಾಗೂ ಸುಳ್ಯದ ರಸ್ತೆ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸಿ, ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ಮನವಿ ನೀಡುವುದಾಗಿ ಟಿ.ಎಂ ಶಾಹಿದ್ ತೆಕ್ಕಿಲ್ ತಿಳಿಸಿದರು.
