ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ. ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ, ಏಳು ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಎಚ್ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ.




Courtesy: TV9
