ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡೀ.ಒ ಜಯಪ್ರಕಾಶ್ ರಿಗೆ ಸನ್ಮಾನ

ಅರಂತೋಡು ಗ್ರಾಮ ಪಂಚಾಯತ್ ಅಭಿವ್ರದ್ಧಿ ಅಧಿಕಾರಿಯಾಗಿ ಸುಧೀರ್ಘ 9 ವರ್ಷಗಳ ಸೇವೆ ಸಲ್ಲಿಸಿ ಜನಸ್ನೇಹಿ ಅಧಿಕಾರಿಯಾಗಿದ್ದ ಪಿ.ಡಿ.ಒ ಜಯಪ್ರಕಾಶ್ ಎಂ.ಆರ್ ರವರನ್ನು ಸೆ.17 ರಂದು ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಅಧ್ಯಕ್ಷರಾದ ಅಮೀರ್ ಕುಕ್ಕುಂಬಳ ಕಾರ್ಯದರ್ಶಿ ಪಸೀಲು, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್, ಸಹಕಾರಿ ಸಂಘದ […]

Read More

ಪಂಜದಲ್ಲಿ ದಸರಾ ಫುಟ್‌ಬಾಲ್ ಸಂಭ್ರಮ: ಜೈ ಭಾರತ್ ‘ಎ’ ಚಾಂಪಿಯನ್, ‘ಬಿ’ ರನ್ನರ್ ಅಪ್

ಪಂಜ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಸ್ಥಳೀಯ ಕೋಟಿ-ಚೆನ್ನಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಜೈ ಭಾರತ್ ‘ಎ’ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ಜೈ ಭಾರತ್ ‘ಬಿ’ ತಂಡವು ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ತಾಲೂಕಿನ ಒಟ್ಟು ಎಂಟು ಬಲಿಷ್ಠ ತಂಡಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಆರಂಭದಿಂದಲೇ ತೀವ್ರ ಪೈಪೋಟಿ ಕಂಡುಬಂದಿದ್ದು, ಅಂತಿಮವಾಗಿ ಒಂದೇ ಸಂಸ್ಥೆಯ ಎರಡು ತಂಡಗಳು ಫೈನಲ್ ಹಣಾಹಣಿಗೆ ಪ್ರವೇಶ ಪಡೆದದ್ದು ವಿಶೇಷವಾಗಿತ್ತು. ಕ್ರೀಡಾಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದ […]

Read More

ಅರಂತೋಡು ಕುಲ್ಚಾರ್ ಸೇತುವೆ ಬಳಿ ಸರಣಿ ಅಪಘಾತ: ಬಸ್, ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಸಮೀಪದ ಬಿಳಿಯಾರು ಸೇತುವೆ ಬಳಿ ಕೆಎಸ್‌ಆರ್‌ಟಿಸಿ ಬಸ್, ಕಾರು ಹಾಗೂ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯ ವಿವರ: ಸುಳ್ಯದಿಂದ ಅರಂತೋಡು ಕಡೆಗೆ ಸ್ಕೂಟರ್ ಸಂಚರಿಸುತ್ತಿದ್ದು, ಅದರ ಹಿಂದಿನಿಂದ ಬರುತ್ತಿದ್ದ ಕಾರು ಸ್ಕೂಟಿಯನ್ನು ಓವರ್‌ಟೇಕ್ ಮಾಡಲು ಯತ್ನಿಸಿದೆ. ಈ ವೇಳೆ ಕೊಯಿನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಕೂಡಲೇ ಬ್ರೇಕ್ ಹಾಕಿದ ಪರಿಣಾಮ, ಬಸ್ ಬಲಗಡೆಗೆ ತಿರುಗಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭದಲ್ಲಿ […]

Read More

ಮೈಸೂರಿನ ಅಂಗಡಿ ಕಸ ಸಂಪಾಜೆಯಲ್ಲಿ ಪತ್ತೆ: GST ರಶೀದಿ ಜಾಡು ಹಿಡಿದು ₹5000 ಫೈನ್ ಹಾಕಿದ ಗ್ರಾ.ಪಂ!

ಕಲ್ಲುಗುಂಡಿ/ಸಂಪಾಜೆ: ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಗ್ರಾಮದ ಕಡೆಪಾಲ ಬಳಿ ರಾತ್ರೋರಾತ್ರಿ ತ್ಯಾಜ್ಯ ಸುರಿದು ಪರಾರಿಯಾಗಿದ್ದ ವ್ಯಕ್ತಿಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಂದೇ ದಿನದಲ್ಲಿ ಪತ್ತೆ ಹಚ್ಚಿ, ₹5,000 ದಂಡ ವಿಧಿಸುವ ಮೂಲಕ ಕಠಿಣ ಸಂದೇಶ ರವಾನಿಸಿದ್ದಾರೆ. ಮೈಸೂರಿನ ಬನ್ನಿಮಂಟಪದ ಅಂಗಡಿಯೊಂದರ ಕಸವನ್ನು ಕಿಡಿಗೇಡಿಗಳು ರಾತ್ರಿ ವೇಳೆಯಲ್ಲಿ ಕಡೆಪಾಲ ಸಮೀಪದ ಹೆದ್ದಾರಿ ಬದಿಯಲ್ಲಿ ಸುರಿದು ಹೋಗಿದ್ದರು. ಮುಂಜಾನೆ ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅವರು […]

Read More

ಜೇಸಿಐ ಸುಳ್ಯ ಪಯಸ್ವಿನಿ ಜೇಸಿಐ ಸಪ್ತಾಹ ಅದ್ದೂರಿಯಾಗಿ ನಡೆದ ಸಮಾರೋಪ ಸಮಾರಂಭ

ಕಲಾಶ್ರೀ, ಪಯಸ್ವಿನಿಶ್ರೀ, ಕಮಲ ಪತ್ರ, ಸೈಲೆಂಟ್ ಸ್ಟಾರ್ ಪ್ರಶಸ್ತಿ ಪ್ರದಾನ | ಹುಟ್ಟೂರಿನ ಗೌರವ ಕಲಾವಿದನಿಗೆ ಬಹಳ ಹೆಮ್ಮೆ ತರುವ ವಿಚಾರ -ಶಶಿಧರ ಕೋಟೆ ಅಮ್ಮನ ಪ್ರೀತಿ ಮತ್ತು ಹುಟ್ಟೂರಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಒಬ್ಬ ಕಲಾವಿದನಿಗೆ ಹುಟ್ಟೂರಿನ ಗೌರವ ಬಹಳ ಹೆಮ್ಮೆ ತರುವ ವಿಚಾರ ಎಂದುಗಾನಗಂಧರ್ವ ಖ್ಯಾತಿಯ ಗಾಯಕ, ಸಂಗೀತ ನಿರ್ದೇಶಕರು ಹಾಗೂ ಚಲನಚಿತ್ರ ನಟರಾದ ಶಶಿಧರ ಕೋಟೆ ಆಶಯ ವ್ಯಕ್ತಪಡಿಸಿದ್ದಾರೆ. ಜೆಸಿಐ ಸುಳ್ಯ ಪಯಸ್ವಿನಿ ಮತ್ತು ಪಯಸ್ವಿನಿಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ […]

Read More

ಕೊನೆಗೂ ಈಡೇರಿತು ಗ್ರಾಮಸ್ಥರ ಕನಸು: ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

ಸುಳ್ಯ: ಸುಳ್ಯ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ಹಾಗೂ ಪ್ರಕೃತಿ ರಮಣೀಯ ಪ್ರವಾಸಿ ತಾಣವಾದ ತೊಡಿಕಾನಕ್ಕೆ ಬಹುದಿನಗಳ ನಿರೀಕ್ಷೆಯಂತೆ ಕೆಎಸ್‌ಆರ್‌ಟಿಸಿ (KSRTC) ಸರ್ಕಾರಿ ಬಸ್ ಸಂಚಾರ ಅಧಿಕೃತವಾಗಿ ಆರಂಭಗೊಂಡಿದೆ. ಸುಮಾರು 35 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಈ ಮಾರ್ಗದಲ್ಲಿ ಮತ್ತೆ ಕೆಎಸ್‌ಆರ್‌ಟಿಸಿ ಬಸ್ ರಸ್ತೆಗಿಳಿದಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಭಕ್ತಾದಿಗಳಲ್ಲಿ ಹರ್ಷ ಮೂಡಿಸಿದೆ. ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಟ ಚೊಚ್ಚಲ ಬಸ್‌ನಲ್ಲಿ ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರಮುಖ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಊರ […]

Read More

ಗ್ರೀನ್ ವ್ಯೂ ಮೋಡೆಲ್ ಮದ್ರಸ ಈದ್ ಮಿಲಾದ್ ವಿದ್ಯಾರ್ಥಿ ಫೆಸ್ಟ್ ಸಂಪನ್ನ ವಿಜೇತ ತಂಡಗಳಿಗೆ ಟ್ರೋಫಿ ವಿತರಣೆ

ನೆಬುಲಸ್ ತಂಡ ಪ್ರಥಮ, ತರಾಬ್ಲಸ್ ತಂಡ ದ್ವಿತೀಯ ಅನ್ಸಾರಿಯಾ ಎಜುಕೇಶನ್ ಸೆಂಟರ್ ಅಧೀನ ದಲ್ಲಿರುವ ಗ್ರೀನ್ ವ್ಯೂ ಮದ್ರಸ ವಿದ್ಯಾರ್ಥಿ ಗಳ ಸಾಂಸ್ಕೃತಿಕ ಕಲಾ ಸಾಹಿತ್ಯ ಸ್ಪರ್ಧೆ ಮತ್ತು ಪ್ರದರ್ಶನ ಸಂಪನ್ನ ಗೊಂಡಿತು ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ನಲ್ಲಿ ನಡೆದ ಸಮಾರೋಪ ಸಮಾರಂಭ ದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ, ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ವಹಿಸಿದ್ದರು ಮದ್ರಸ ಮುಖ್ಯ ಶಿಕ್ಷಕ ಸಯ್ಯದ್ ಹುಸೈನ್ ಸಅದಿ ಸ್ವಾಗತಿಸಿದರುಸಮಾರೋಪ ಸಮಾರಂಭ ದಲ್ಲಿ ಅನ್ಸಾರ್ ನಿರ್ದೇಶಕ ಸಿರಾಜ್ ಫ್ಯಾನ್ಸಿ, ಗಲ್ಫ್ […]

Read More

ರಾಜ್ಯಕ್ಕೆ ಬರಗಾಲದ ಆಘಾತ: ಕಠಿಣ ದಿನಗಳ ಮುನ್ಸೂಚನೆ ನೀಡಿದ ಡಿ.ಕೆ. ಶಿವಕುಮಾರ್

ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ. ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆಯ ಅಭಾವದಿಂದ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ರೈತರಿಗೆ ಹಲವೆಡೆ ಬಿತ್ತನೆ ಕಾರ್ಯವನ್ನೇ ಕೈಗೊಳ್ಳಲು ಸಾಧ್ಯವಾಗಿಲ್ಲ. ಈಗಾಗಲೇ ನೂರಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದ್ದು, ಕೇಂದ್ರದ ಮಾರ್ಗಸೂಚಿ ಪ್ರಕಾರ ಸಮೀಕ್ಷೆ ನಡೆಸಿ […]

Read More

ಕಲ್ಲುಗುಂಡಿ ಸುನ್ನಿ ಸೆಂಟರ್: ಮೌಲಿದ್ ಮಜ್ಲಿಸ್ ಮತ್ತು ತಾಜುಲ್ ಉಲಮಾ ಅನುಸ್ಮರಣೆ

ಕಲ್ಲುಗುಂಡಿ: ಸುನ್ನಿ ಸೆಂಟರ್‌ನಲ್ಲಿ ಸೆಪ್ಟೆಂಬರ್ 13 ರಂದು ಎಸ್.ಎಸ್.ಎಫ್., ಎಸ್.ವೈ.ಎಸ್. ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯೂನಿಟ್ ಜಂಟಿ ಆಶ್ರಯದಲ್ಲಿ ಮೌಲಿದ್ ಮಜ್ಲಿಸ್, ಮಹ್ಳರತುಲ್ ಬದ್ರಿಯ್ಯ ಹಾಗೂ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮವು ಶ್ರದ್ಧಾ-ಭಕ್ತಿಗಳೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಜಲೀಲ್ ಸಖಾಫಿ ಕೊಂಡಂಗೇರಿ ಅವರು ಮಾತನಾಡಿ, “ಪ್ರವಾದಿ ಪ್ರೇಮ ಮತ್ತು ಧಾರ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ” ಎಂದು ಪ್ರವಾದಿ ಪ್ರೇಮ ಹಾಗೂ ಧಾರ್ಮಿಕ ಜಾಗೃತಿಯ ಕುರಿತು ನೆರೆದಿದ್ದ ಜನರಿಗೆ ಆಧ್ಯಾತ್ಮಿಕ […]

Read More

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ನೂತನ ರಾಜ್ಯಾಧ್ಯಕ್ಷೆಯಾಗಿ ಶಾಹಿದಾ ತಸ್ನೀಮ್ ಆಯ್ಕೆ

ಬೆಂಗಳೂರು: ಸೆಪ್ಟೆಂಬರ್ 11: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಕರ್ನಾಟಕದ 2026ರ ರಾಜ್ಯ ಪ್ರತಿನಿಧಿ ಸಭೆಯು ಸೆಪ್ಟೆಂಬರ್ 13, 2026ರಂದು ಬೆಂಗಳೂರಿನ ಪಾಲನ ಭವನದಲ್ಲಿ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾರವರ ಅದ್ಯಕ್ಷತೆಯಲ್ಲಿ ನಡೆಯಿತು .ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯದ್ಯಕ್ಷರಾದ ಅಬ್ದುಲ್ ಮಜೀದ್ ರವರು ಗಿಡಕ್ಕೆ ನೀರುಣಿಸುವ ಮೂಲಕಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಘಾಟನಾ ಭಾಷಣ ನೆರವೇರಿಸಿದರು. ರಾಜ್ಯ ಪ್ರತಿನಿಧಿ ಸಭೆಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ನಡೆಸಿದ ವಿವಿಧ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ […]

Read More