ಸುಳ್ಯ: ಸುಳ್ಯದ ಪರಿವಾರಕಾನದ ನಿವಾಸಿಯಾಗಿದ್ದ ಚಂದ್ರಶೇಖರ್ (55) ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ರಾತ್ರಿ ಚಂದ್ರಶೇಖರ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸುಳ್ಯದ ಕೆವಿಜಿ (KVG) ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಕವಿತಾ, ಪುತ್ರ ಸಿಂಚನ್, ಪುತ್ರಿ ಸೇವಿತಾ, ಸಹೋದರರಾದ ಲೋಕನಾಥ್, ರವೀಂದ್ರನಾಥ್, ಸಹೋದರಿ ಯೋಗೀತಾ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.




