ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.

ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ರಾಹೀಜ್ (16) ಮತ್ತು ಮಹಮದ್ ನಿಹಾಲ್ (16) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ವಿದ್ಯಾರ್ಥಿಗಳು ಇಂದು ಕಾಲೇಜು ತರಗತಿ ಮುಗಿದ ಬಳಿಕ ಹರದೂರು ಹೊಳೆಗೆ ಈಜಲು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ನೀರಿನಲ್ಲಿ ಮುಳುಗಿ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳುಗು ತಜ್ಞರ ಸಹಾಯದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
