ಮುಚ್ಚಿಲ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರ ಕಾರು ಅಪಘಾತ; ಅಪಾಯದಿಂದ ಪಾರು

News

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ.

ನಿಂತಿಕಲ್ಲು ಮಾರ್ಗವಾಗಿ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಶಾಸಕಿಯವರ ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಶಾಸಕಿಯವರ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದ್ದು, ಸ್ವಿಫ್ಟ್ ಕಾರಿನ ಹಿಂಬದಿಗೂ ಹಾನಿಯಾಗಿದೆ. ಘಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಎರಡೂ ವಾಹನಗಳಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *