ದ. ಕ ಮತ್ತು ಉಡುಪಿ ಜಿಲ್ಲೆಗಳಿಂದ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳಾಗಿ ನೇಮಕ ಗೊಂಡವರ ಸಭೆ ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು
ಈ ಸಂದರ್ಭದಲ್ಲಿ ಮಾತನಾಡಿದ ಭಂಡಾರಿಯವರು ಪಕ್ಷ ಮತ್ತು ಸರ್ಕಾರ ನಿಮ್ಮ ಸೇವೆಯನ್ನು ಗುರುತಿಸಿ ಸ್ಥಾನ ಮಾನ ನೀಡಿದೆ ಎಲ್ಲರೂ ಪಕ್ಷದೊಂದಿಗೆ ಸಮನ್ವಯತೆ ಸಾದಿಸಿ ತಮ್ಮ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜನರಿಗೆ ಸೌಲಭ್ಯ ಗಳನ್ನು ಕಲ್ಪಿಸುವಲ್ಲಿ ಶ್ರಮ ವಹಿಸಬೇಕು, ಮುಂಬರುವ ಚುನಾವಣೆ ಗಳಲ್ಲಿ ಪಕ್ಷವನ್ನು ಗೆಲ್ಲಿಸಿ ಕೊಡುವಲ್ಲಿ ಪ್ರಮುಖ ಪಾತ್ರವಹಿಸಬೇಕು, ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದರೆ ಸರ್ಕಾರ ಮಟ್ಟದಲ್ಲಿ ಬಗೆ ಹರಿಸಲು ಶ್ರಮಿಸಲಾಗುವುದು ಎಂದರು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಉಪಸ್ಥಿತರಿದ್ದರು
ಸಭೆಯಲ್ಲಿ ಉಭಯ ಜಿಲ್ಲೆಗಳ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳು ಭಾಗವಹಿಸಿದ್ದರು
ಸುಳ್ಯದಿಂದ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನoದ ಮಾವಜಿ ಮತ್ತು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಅಧ್ಯಕ್ಷರು ಎಲ್ಲರಿಗೂ ಶಾಲು ಹಾಕಿ ಗೌರವಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *