ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

​ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್ ಸಿ ಬಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 16.3 ಓವರ್‌ಗಳಲ್ಲಿ 75 ರನ್‌ಗಳಿಗೆ ಸರ್ವಪತನ ಕಂಡಿತು. ಆರ್ ಸಿ ಬಿ ಪರ ಜೋಷ್ ಹೇಜಲ್‌ವುಡ್ 4 ವಿಕೆಟ್ (4/12) ಮತ್ತು ಭುವನೇಶ್ವರ್ ಕುಮಾರ್ 3 ವಿಕೆಟ್ (3/5) ಪಡೆದು ಮಿಂಚಿದರು. ಪಂದ್ಯದ ನಡುವೆ ಭಾರಿ ಧೂಳಿನ ಬಿರುಗಾಳಿ (Dust Storm) ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆಟವನ್ನು ಸ್ಥಗಿತಗೊಳಿಸಲಾಗಿತ್ತು.

​ಗೆಲ್ಲಲು 76 ರನ್‌ಗಳ ಅತ್ಯಂತ ಸುಲಭ ಗುರಿಯನ್ನು ಬೆನ್ನತ್ತಿದ ಆರ್ ಸಿ ಬಿ, ಕೇವಲ 6.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 77 ರನ್ ಗಳಿಸುವ ಮೂಲಕ ಅನಾಯಾಸವಾಗಿ ಗೆಲುವಿನ ದಡ ಸೇರಿತು.

Leave a Reply

Your email address will not be published. Required fields are marked *