2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ದಿಯಾ ಹಾಜಿರಾ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

​ಒಟ್ಟು 625 ಅಂಕಗಳಲ್ಲಿ 611 ಅಂಕಗಳನ್ನು ಗಳಿಸಿರುವ ಇವರು, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ದಿಯಾ ಹಾಜಿರಾ ಅವರು ಬಶೀರ್ ಕೆ. ಪಿ. ಮತ್ತು ರಾಹಿಲಾ ದಂಪತಿಯ ಪುತ್ರಿಯಾಗಿದ್ದಾರೆ.

​ವಿದ್ಯಾರ್ಥಿನಿಯ ಈ ಅತ್ಯಮೂಲ್ಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿ, ಮುಂದಿನ ವ್ಯಾಸಂಗಕ್ಕೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *