ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ, ಚುಟುಕು ವಾಚನಗಳನ್ನು ಮಾಡಿದುದಲ್ಲದೇ ಮಂಗಳೂರು, ಮಡಿಕೇರಿ ಆಕಾಶವಾಣಿಗಳಲ್ಲೂ ಕವನ ವಾಚಿಸಿದ್ದರು. ಇವರು ಈಗಾಗಲೇ “ಮೌನವನು ಮುರಿದಾಗ” ಎಂಬ ಕವನ ಸಂಕಲನವನ್ನು ಹೊರತಂದಿದ್ದು, “ಜೀವನ ಪಯಣ” ಕವನ ಸಂಕಲನ ಪ್ರಕಟಣಾ ಹಂತದಲ್ಲಿದೆ. ಇವರು ಪದ್ಮಯ್ಯ ಗೌಡ ಕುರುಂಜಿ ಮತ್ತು ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ ಹಾಗೂ ಕೆ ವಿ ಜಿ ಪಾಲಿಟೆಕ್ನಿಕ್ ನ ಶಿಕ್ಷಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Reply

Your email address will not be published. Required fields are marked *