ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ಅಧ್ಯಕ್ಷ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು.
ಎ.ಒ.ಎಲ್.ಇ ಕಮಿಟಿ” ಬಿ”ಯ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ. ವಿ . ಸಂಸ್ಥೆಯ ಪ್ರಾಂಶುಪಾಲ ಅಣ್ಣಯ್ಯ ಕೆ, ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಪಿ, ಕೆವಿಜಿ ಐಟಿಐ ಪ್ರಾಂಶುಪಾಲ ದಿನೇಶ್ ಮಡ್ತಿಲ, ಎ.ಒ.ಎಲ್.ಇ.ಕಮಿಟಿ” ಬಿ” ಯ ಆಡಳಿತಾಧಿಕಾರಿ ಭವಾನಿ ಶಂಕರ ಅಡ್ತಲೆ, ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾ ಧಿಕಾರಿ ಮಾಧವ ಬಿ.ಟಿ , ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದು ಕೆವಿಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Leave a Reply

Your email address will not be published. Required fields are marked *