ದುಬಾರೆ: ಸಾಕಾನೆ ಶಿಬಿರದಲ್ಲಿ ಆನೆಗಳ ನಡುವೆ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಆನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರಂತ ಘಟನೆ ವರದಿಯಾಗಿದೆ.

ಘಟನೆಯ ವಿವರ:
ನಿನ್ನೆ ದುಬಾರಿಯಲ್ಲಿ ಸಾಕಾನೆ ‘ಕಂಜನ್’, ‘ಮಾರ್ತಾಂಡ’ ಆನೆಯ ಮೇಲೆ ಏಕಾಏಕಿ ದಾಳಿ ನಡೆಸಿ, ದಂತದಿಂದ ತೀವ್ರವಾಗಿ ತಿವಿದಿತ್ತು. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ಅರಣ್ಯ ಇಲಾಖೆ ವತಿಯಿಂದ ಸ್ಥಳದಲ್ಲೇ ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆನೆ ಕೊನೆಯುಸಿರೆಳೆದಿದೆ.
ಅಧಿಕಾರಿಗಳ ಭೇಟಿ:
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಎರಡು ದಿನ ದುಬಾರೆ ಶಿಬಿರ ಬಂದ್:
ನಿನ್ನೆ ನಡೆದ ಈ ದುರ್ಘಟನೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರವನ್ನು ಮುಂದಿನ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.







