ಪುತ್ತೂರು ಡಿಸೆಂಬರ್ 10: ಕೆವಿಜಿ ಸುಳ್ಯ ಹಬ್ಬ ಕಾರ್ಯಕ್ರಮದಲ್ಲಿ ದಫ್ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರುಕೊನೆಗೂ ದಫ್ ಪ್ರದರ್ಶನವನ್ನ ಕೈಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ) ಇದರ ವತಿಯಿಂದ ಡಿಸೆಂಬರ್ 25 ಮತ್ತು 26 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕೆವಿಜಿ ಸುಳ್ಯ ಹಬ್ಬ-2025 ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಾಂಸ್ಕ್ರತಿಕ ಕಾರ್ಯಕ್ರಮ ‘ದಫ್ ಪ್ರದರ್ಶನ’ ಆಯೋಜನೆ ಮಾಡಲಾಗಿತ್ತು ಈ ನಡುವೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಲಿದ್ದ ದಫ್ ಪ್ರದರ್ಶನಕ್ಕೆ ವಿಎಚ್ ಪಿ ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು, ದೇವಸ್ಥಾನದ ಮುಂಭಾಗ ದಫ್ ಪ್ರದರ್ಶನ ಮಾಡಿದ್ರೆ ಮಸೀದಿ ಮುಂದೆ ಹನುಮಾನ್ ಚಾಲೀಸ್ ಪಠಣ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಸಂಘಟಕರು ದಫ್ ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.




