ಎಡಮಂಗಲ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ ಎಂಬವರು ಎಡಮಂಗಲದ ಪುಳಿಕುಕ್ಕು ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ದೀಪಕ್ ಅವರು ಪುಳಿಕುಕ್ಕು ಬಳಿಯ ತಮ್ಮ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅವರ ಪತ್ನಿ ಕಡಬದಲ್ಲಿರುವ ತಾಯಿ ಮನೆಗೆ ತೆರಳಿದ್ದರೆನ್ನಲಾಗಿದೆ. ಮೃತರು ಪತ್ನಿ, ಮಗಳು ಹಾಗೂ ಸಹೋದರರನ್ನು ಅಗಲಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.
