150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್

ಕಳೆದುಕೊಂಡು 246 ರನ್ ಕಲೆಹಾಕಲಷ್ಟೇ ಶಕ್ತವಾಗಿ 52 ರನ್ಗಳಿಗೆ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೇರಿ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *