
ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಜತೆ ಕಾರ್ಯದರ್ಶಿ ಅಮೀರ್ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್, ಆಶಿಕ್ ಕುಕ್ಕುಂಬಳ, ಮುಝಮ್ಮಿಲ್ ಕುಕ್ಕುಂಬಳ, ಎ.ಉಮ್ಮರ್, ಇಸಾಕುದ್ಧೀನ್ ಮೊಯಿದು ಕುಟ್ಟಿ, ಅನ್ಸಾಫ್ ಸಣ್ಣಮನೆ, ಅಪ್ಸಲ್ ಎಸ್.ಹೆಚ್, ಹಮೀದ್ ಮೊದಲಾದವರು ಉಪಸ್ಥಿತರಿದ್ದರು. ತಾಜುದ್ದೀನ್ ಅರಂತೋಡು ಸ್ವಾಗತಿಸಿ; ಮುಝಮ್ಮಿಲ್ ವಂಧಿಸಿದರು.




