ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧ ಕುರಿತಂತೆ ಇತ್ತೀಚಿಗೆ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದವು. ಇದೀಗ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ಸಿಬ್ಬಂದಿ ಭಾಗಿಯಾಗಬಾರದು, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ನಿಯಮ ಜಾರಿಯಲ್ಲಿದೆ.ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರ ಅಡಿ ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿ ಭಾಗಿ ಆದರೆ ಶಿಸ್ತು ಕ್ರಮ ಆಗಲಿದೆ ಎಂದು ಈ ಕುರಿತು ಸುತ್ತೋಲೆ ಹೊರಡಿಸಲು ಸಿದ್ಧರಾಮಯ್ಯ ಅವರಿಗೆ ಪ್ರಿಯಾಂಕ ಖರ್ಗೆ ಮನವಿ ಮಾಡಿದ್ದಾರೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಸಿಎಂಗೆ ಬರೆದ ಪತ್ರದಲ್ಲೇನಿದೆ?
ಯಾವುದೇ ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅವುಗಳೊಂದಿಗೆ ಅನ್ಯತಾ ಸಂಬಂಧ ಹೊಂದಿರತಕ್ಕದ್ದಲ್ಲ. ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರು ಸಹ ಇತ್ತೀಚಿನ ದಿನಗಳಲ್ಲಿ ಆರ್ಎಸ್ಎಸ್ ಇತರೆ ಸಂಘ-ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಆರ್ಎಸ್ಎಸ್ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಎಷ್ಟು ಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ನೌಕರರ ಸಂಬಂಧಪಟ್ಟವರಿಗೆ ಸೂಕ್ತವಾದ ನಿರ್ದೇಶನ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ಬರೆದ ಪಾತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

