ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ). (ಎನ್. ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ‌.ಜಿ ಪಾಲಿಟೆಕ್ನಿಕ್ ಸುಳ್ಯ) ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ ಸಭೆಯನ್ನು ಅರಂಬೂರಿನ “ವಿಕಸನ” ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು, ಕೆ ವಿ ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರರುಗಳಾದ ಕೆ ವಿ ಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಸಿ ಬಿಳಿನೆಲೆ, ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ಎನ್ನೆಂಸಿಯ ಸಹಾಯಕ ಪ್ರಾಧ್ಯಾಪಕರಾದ
ಡಾ| ಅನುರಾಧಾ ಕುರುಂಜಿ, ಇವರುಗಳನ್ನು ಗೌರವಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪ್ರಸ್ತುತ ವರ್ಷ ಸಂಘವು ದಶಮಾನೋತ್ಸವವನ್ನು ಆಚರಿಸುತ್ತಿದ್ದು, ಸಂಘದ ಪ್ರಥಮ ತೈಮಾಸಿಕ ಸಭೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಚರ್ಚಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಕಾರ್ಯಕಾರಿ ಅಧ್ಯಕ್ಷರಾದ ರಕ್ಷಿತ್ ಬೊಳ್ಳೂರು, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್, ಕಾರ್ಯದರ್ಶಿ ಸುಶಾಂತ್ ಅಜ್ಜಿಕಲ್ಲು, ಯಶವಂತ, ಯೂರೇಶ್ ಕೊಪ್ಪಡ್ಕ, ಪೂರ್ಣಿಮ ಚೊಕ್ಕಾಡಿ, ಲೋಹಿತ್ ರೆಂಜಳ, ಚರಿತ್ ರೈ, ಅಚಲ್ ಬಿಳಿನೆಲೆ, ಅಂಶಲ್ ಬಿಳಿನೆಲೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *