ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ!

News

Bengaluru: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ನನಗೆ ಈಗ 80 ವರ್ಷ ವಯಸ್ಸು ಆಗಿದೆ ಹಾಗಾಗಿ ಮುಂದಿನ ಚುನಾವಣೆಗೆ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇನ್ನೂ ದೆಹಲಿಯಲ್ಲಿ ಸೋನಿಯಾ ಗಾಂಧಿ ಪುಸ್ತಕ ರಿಲೀಸ್ ಕಾರ್ಯಕ್ರಮದಲ್ಲಿ ಹಿಂದೆ ಕುಳಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸೋನಿಯಾ ಗಾಂಧಿಯವರ ಪುಸ್ತಕ ರಿಲೀಸಿಗೆ ನಾನು ತಡವಾಗಿ ಹೋಗಿದ್ದೆ, ತಡವಾಗಿ ಹೋಗಿದ್ದಕ್ಕೆ ನಾನು ಹಿಂದೆ ಕುಳಿತೆ, ಈಗಾಗಲೇ ಈ ಕುರಿತಂತೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೃಪೆ: Kannadanewsnow

Leave a Reply

Your email address will not be published. Required fields are marked *