ಹದಿನೈದು ದಿನಗಳಲ್ಲಿ ರಸ್ತೆ ಕಾಮಗಾರಿ ಆರಂಭಿಸದಿದ್ದರೆ, ಸವಣೂರು ಪಂಚಾಯತ್‌ಗೆ ಮುತ್ತಿಗೆ ಹಾಕಲಿದ್ದೇವೆ: ರಫೀಕ್ ಎಂ ಎ

News

ಸವಣೂರು ಮುಖ್ಯರಸ್ತೆ ಅವ್ಯವಸ್ಥೆ ಹಾಗೂ ಬೆಲೆಯೇರಿಕೆ ವಿರುದ್ದ ಎಸ್‌ಡಿಪಿಐ ಪ್ರತಿಭಟನೆ

ಸವಣೂರು; ನ 20: ಪೇಟೆಯ ಮುಖ್ಯರಸ್ತೆ ದುರಸ್ತಿ ಹಾಗೂ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸವಣೂರು ಬ್ಲಾಕ್ ಸಮಿತಿ ವತಿಯಿಂದ ಶುಕ್ರವಾರ ಸವಣೂರು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಸವಣೂರು ಬ್ಲಾಕ್ ಅಧ್ಯಕ್ಷ ರಫೀಕ್ ಎಂ ಎ ರವರು ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದು, ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ಆಡಳಿತ ವ್ಯವಸ್ಥೆಯ ಜವಾಬ್ದಾರಿಯಾಗಿದ್ದು, ಸಮಸ್ಯೆ ಪರಿಹಾರವಾಗುವವರೆಗೆ ಎಸ್.ಡಿ.ಪಿ.ಐ ಜನರ ಪರವಾಗಿ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದರು. ರಸ್ತೆ ದುರಸ್ತಿಯನ್ನು ಮುಂದಿನ 15 ದಿನಗಳೊಳಗಾಗಿ ಕೈಗೊಳ್ಳದಿದ್ದಲ್ಲಿ ಡಿಸೆಂಬರ್ 5ರಂದು “ನಮ್ಮ ನಡಿಗೆ ಪಂಚಾಯತ್ ಕಡೆಗೆ” ಎಂಬ ಘೋಷಣೆಯೊಂದಿಗೆ ಪಂಚಾಯತ್‌ಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರು ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಸವಣೂರು ರವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯ ರಜಾಕ್ ಕೆನರಾ ಮಾತನಾಡಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಬೆಲೆ ನಿಯಂತ್ರಣ ಮಾಡಬೇಕು ಹಾಗೂ ರಸ್ತೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿಯನ್ನು ಎಸ್.ಡಿ.ಪಿ.ಐ ಶಾಂತಿನಗರ ಬ್ರಾಂಚ್ ಅಧ್ಯಕ್ಷ ಅಶ್ರಫ್ ಜನತಾ ವಾಚಿಸಿದರು.

ಬಳಿಕ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಿಕ್ವೇರಾ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗುರುವರವರು ಮನವಿಯನ್ನು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ ಕೊಡುವುದಾಗಿ ಪ್ರತಿಭಟನಾಕಾರರಿಗೆ ತಿಳಿಸಿದರು

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಆರಿಫ್ ಅಂಕತಡ್ಕ, ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಅಬ್ದುಲ್ ರಜಾಕ್ ಎ ಎಸ್, ಸಹಲ್ ಕಾಂಪ್ಲೆಕ್ಸ್ ಮಾಲಕರಾದ ಅಬ್ದುಲ್ ಖಾದರ್ ಹಾಜಿ,ಸ್ಥಳೀಯ ವಿವಿಧ ಸಾಮಾಜಿಕ ಧಾರ್ಮಿಕ ಸಂಘಟನೆ ಹಾಗೂ ಸಂಘಸಂಸ್ಥೆಗಳ ಮುಖಂಡರಾದ ಕೆಎಂ ಮೊಹಮ್ಮದ್, ಯೂಸುಫ್ ಹಾಜಿ ಬೇರಿಕೆ, ಮೆಹರಾಜ್ , ಹಮೀದ್ ಮುಕ್ಕೂರು ಹಾಗೂ ಕುಮಾರಧಾರ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕ ಬಾಂಧವರು ಉಪಸ್ಥಿತರಿದ್ದರು

ಎಸ್ ಡಿ ಪಿ ಐ ಸವಣೂರು ಬ್ಲಾಕ್ ಕಾರ್ಯದರ್ಶಿ ಸಹಿರ್ ರಾಯಲ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ಉಪಾಧ್ಯಕ್ಷರಾದ ಇಕ್ಬಾಲ್ ಕೆನರಾ ಧನ್ಯವಾದಗೈದರು.

Leave a Reply

Your email address will not be published. Required fields are marked *