ಸುಳ್ಯ: ಇಲ್ಲಿನ ಬೊಳುಬೈಲು ಪ್ರದೇಶದಲ್ಲಿ ಮಾರುತಿ ಸುಜುಕಿ ಇಗ್ನಿಸ್ (Suzuki Ignis) ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಕಾರಿನಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಒಬ್ಬ ಬಾಲಕ ಸೇರಿದಂತೆ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ತಕ್ಷಣವೇ ರಕ್ಷಿಸಿ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಳ್ಯದ ರಫೀಕ್’ ಮಾಲೀಕತ್ವದ ಲೈಫ್ ಕೇರ್ ಅಂಬ್ಯುಲೆನ್ಸ್, ಹಾಗೂ SSF ಸಂಘಟನೆಯ ಆಂಬ್ಯಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಕಾರು ಪಲ್ಟಿಯಾದ ರಭಸಕ್ಕೆ ವಾಹನವು ತೀವ್ರವಾಗಿ ಜಖಂಗೊಂಡಿದೆ. ಗಾಯಾಳುಗಳ ನಿಖರ ಮಾಹಿತಿ ಹಾಗೂ ಅಪಘಾತಕ್ಕೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.





