ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ನಡೆದಾಡುವುದೇ ಕಷ್ಟಕರವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ ಸಾರ್ವಜನಿಕರು ನಡೆದಾಡುವ ವೇಳೆ ನಾಯಿಗಳು ದಾಳಿ ನಡೆಸುತ್ತಿವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಪ್ರಸಂಗ‌ಕೂಡ ನಡೆದಿದೆ. ಪೈಚಾರ್ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟು ಹೋಟೆಲ್‌ ಸಮೀಪ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಿದ್ದಾರೆ. ಹಗಲಿನಲ್ಲಿ ಸಾಧುವಂತೆ ವರ್ತಿಸುವ ಶ್ವಾನಗಳು ಸಂಜೆಯಾಗುತ್ತಿದ್ದಂತೆ ಮೃಗದಂತೆ ಕೆರಳಿ ನಿಲ್ಲುತ್ತಿವೆ. ಈ ಸಮಯದಲ್ಲಿ ಮಕ್ಕಳು ಮತ್ತು ಸಾರ್ವಜನಿಕರು ಹೊರಬರಲು ಹೆದರುತ್ತಾರೆ. ಬೈಕ್‌ ಅಥವಾ ಇನ್ನಿತರ ಯಾವುದೇ ವಾಹನಗಳಲ್ಲಿ ಸಂಚರಿಸುವ ವೇಳೆ ಹಿಂಬದಿಯಿಂದ ಅಟ್ಟಾಡಿಸಿಕೊಂಡು ಬಂದು ದಾಳಿ ನಡೆಸುತ್ತಿವೆ. ಈ ಘಟನೆಯಲ್ಲಿ ಹಲವು ಮಂದಿ ಬಿದ್ದು ಗಾಯಗೊಂಡಿದ್ದಾರೆ. ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೇ ಇರುತ್ತದೆ. ಚಲಿಸುತ್ತಿರುವ ದ್ವಿಚಕ್ರ ವಾಹನಗಳುಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸರ್ವೇ ಸಾಮಾನ್ಯವಾಗಿದೆ. ರಾತ್ರಿ ವೇಳೆ ನಾಯಿಗಳ ಕೂಗಾಟ, ಚೀರಾಟದಿಂದ ನೆಮ್ಮದಿಯ ನಿದ್ದೆ ಮಾಡಿ ಹಲವು ತಿಂಗಳು ಕಳೆದಿದೆ ಎಂಬುದಾಗಿದೆ ಸಾರ್ವಜನಿಕರ ಅಹವಾಲು. ನಾಯಿಗಳ ಉಪಟಲಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹಲವು ಬಾರಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೊಟ್ಟರು ಒಂದು ನಯಪೈಸ ಉಪಯೋಗವಾಗಿಲ್ಲ. ಏನೇ ಆಗಲಿ ನಾಯಿಗಳಿಂದ ನಡೆಯಬಹುದಾದ ಅನಾಹುತವನ್ನು ತಪ್ಪಿಸಲು ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸೂಕ್ತವಾದ ಕ್ರಮ ಕೈಗೊಳ್ಳಲು ವಿನಂತಿ

ಇತೀ
ಬಶೀರ್ ಆರ್. ಬಿ
ಅಧ್ಯಕ್ಷರು ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್

Leave a Reply

Your email address will not be published. Required fields are marked *