ನವಿ ಮುಂಬೈನ ಡಿವೈ ಪಾಟೀಲ್(DY Patil) ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಐಸಿಸಿ(ICC) ಮಹಿಳಾ ಏಕದಿನ ವಿಶ್ವಕಪ್(World Cup) 2025 ರ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ. ಜೆಮಿಮಾ ರೋಡ್ರಿಗಸ್(Jemimah Rodrigues) ಭರ್ಜರಿ ಶತಕ ಸಿಡಿಸಿ ಭಾರತ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಭಾರೀ ಕುತೂಹಲ ಮೂಡಿಸಿತ್ತು. ಕೊನೆಗೂ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದ ಹರ್ಮನ್ಪ್ರೀತ್ ಕೌರ್ ಮುನ್ನಡೆಸುತ್ತಿರುವ ಭಾರತ ತಂಡ ವಿಶ್ವಕಪ್ ಗೆಲುವಿನ ನಿರೀಕ್ಷೆಯಲ್ಲಿದೆ.



