Kadaba: , ನ.14: ಹಣ್ಣುಹಂಪಲು ಸಾಗಾಟದ ಗೂಡ್ಸ್ ಆಪೆ ವಾಹನ ಹಾಗೂ ಕಾರೊಂದರ ನಡುವೆ ಅಪಘಾತ ಸಂಭವಿಸಿದ ಪರಿಣಾಮ ತಮೀಮ್ ಎಂಬ ಯುವಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಇಂದು ಬೆಳಗ್ಗೆ ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಇದರಿಂದ ಪಿಕಪ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಮೃತಪಟ್ಟ ತಮೀಮ್ ಕೆಲವೆ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಭರದಲ್ಲಿದ್ದರು, ಆದರೆ ವಿಧಿ ಆಟವೇ ಬೇರೆಯಾಗಿತ್ತು.
.
