ಕಡಬ:ಆ.18- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಹಗಲಿರುಲೆನ್ನದೇ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ದುಡಿದಂತಹ ಕಾರ್ಯಕರ್ತರಿಗೆ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಬಂಟ್ವಾಳ ವಿಧಾನಸಭಾ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕಡಬ ಬ್ಲಾಕ್ ಸಮಿತಿ ಉಪಾಧ್ಯಕ್ಷ ರಮ್ಲಾನ್, ನಬಿ ಶಾನ್ ಕಡಬ ಉಪಸ್ಥಿತರಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಶರೀಫ್ ನಿಂತಿ ಕಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.