ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ. ತಕ್ಷಣ ಆಸ್ಪತ್ರೆಗೆ ಗಾಯಾಳುಗಳನ್ನು ತರಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಕಾರನಲ್ಲಿದ್ದವರು ಸಿದ್ಧಾಪುರ ಮೂಲದವರೆಂದು ತಿಳಿದು ಬಂದಿದೆ

