ಸುಳ್ಯ: ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ ವಿ. ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಜ. 7) ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಮಲಾಕ್ಷಿ ಟೀಚರ್ ಅವರು ಚೆನ್ನಕೇಶವ ದೇವಸ್ಥಾನದ ಬಳಿಯ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
🛒 Recommended for You:
ಅಂತಿಮ ದರ್ಶನಕ್ಕೆ ವ್ಯವಸ್ಥೆ:
ಮೃತರ ಪಾರ್ಥಿವ ಶರೀರವನ್ನು ಚೆನ್ನಕೇಶವ ದೇವಸ್ಥಾನದ ಬಳಿಯಿರುವ ಅವರ ನಿವಾಸಕ್ಕೆ ತರಲಾಗಿದ್ದು, ಇಂದು ಸಂಜೆ 4 ಗಂಟೆಯ ತನಕ ಸಾರ್ವಜನಿಕರಿಗೆ ಮತ್ತು ಹಿತೈಷಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.







