
ಸುಳ್ಯ: ತಾಲೂಕಿನ ಕನಕಮಜಲು ಬಳಿ ಮುಖ್ಯ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಗಿತಗೊಂಡಿದೆ.
ಈ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರಿ ಮಳೆ ಮತ್ತು ಗಾಳಿಯ ಅಬ್ಬರಕ್ಕೆ ಮರ ಧರೆಗುರುಳಿದೆ. ಮರ ಅಡ್ಡಲಾಗಿ ಬಿದ್ದಿರುವುದರಿಂದ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳು ಉದ್ದುದ್ದ ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಸುರಿಯುತ್ತಿರುವ ಮಳೆಯ ನಡುವೆಯೂ ಮರವನ್ನು ತೆರವುಗೊಳಿಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಆರಿಫ್







