ಕಾರ್ಕಳ ಅಗಸ್ಟ್ 26: ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ.

ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊ*ಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು,ಘಟನಾ ಸ್ಥಳಕ್ಕೆ ಎಸ್ ಪಿ ಹರಿರಾಮ್ ಶಂಕರ್, ಎಎಸ್ ಪಿ ಡಾ. ಹರ್ಷಪ್ರಿಯಂವದ ಮೊದಲಾದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.