ಕೇರಳ ವಿಧಾನಸಭಾ ಚುನಾವಣೆ ೨೦೨೬ರ ಫಲಿತಾಂಶ ಪ್ರಕಟವಾಗಿದ್ದು, ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಅಭ್ಯರ್ಥಿ ಕಲ್ಲಟ್ರ ಮಾಹಿನ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

​ಕಲ್ಲಟ್ರ ಮಾಹಿನ್ ಅವರು ಒಟ್ಟು ೭೬,೩೯೬ ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರನ್ನು ೨೨,೬೯೮ ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಅವರು ೫೩,೬೯೮ ಮತಗಳಿಗೆ ತೃಪ್ತಿಪಟ್ಟಿದ್ದಾರೆ.

​ಈ ಗೆಲುವಿನೊಂದಿಗೆ ಕಾಸರಗೋಡು ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ತನ್ನ ಭದ್ರಕೋಟೆಯನ್ನು ಮತ್ತೆ ಉಳಿಸಿಕೊಂಡಿದ್ದು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *