ಕೊಚ್ಚಿ ಕಾರು ಅಪಘಾತ: ಮೃತ ಯುವಕ ಇಯಾಝ್ ಮನೆಗೆ ಗಣ್ಯರ ಭೇಟಿ; ಕುಟುಂಬಕ್ಕೆ ಸಾಂತ್ವನ ಹಾಗೂ ಬೆಂಬಲದ ಭರವಸೆ

News

ಸುಳ್ಯ: ಕೇರಳದ ಕೊಚ್ಚಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನಪ್ಪಿದ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಇಯಾಜ್‌ ಅವರ ನಿವಾಸಕ್ಕೆ ಗಣ್ಯರು ಭೇಟಿ ನೀಡಿ, ಶೋಕಾಸಕ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾಸರಗೋಡು ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಹಾಗೂ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಹೀದ್ ತೆಕ್ಕಿಲ್ ಅವರು ಕನಕಮಜಲುವಿನಲ್ಲಿರುವ ಇಯಾಜ್‌ ಅವರ ಮನೆಗೆ ತೆರಳಿ, ಮೃತರ ಪೋಷಕರು ಹಾಗೂ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದುರ್ಘಟನೆಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು (ಕೇಸ್) ಹಾಗೂ ಕುಟುಂಬಕ್ಕೆ ದೊರೆಯಬೇಕಾದ ಪರಿಹಾರದ ವಿಚಾರದಲ್ಲಿ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.

ಈ ಭೇಟಿಯ ವೇಳೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ. ಮುಸ್ತಫಾ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *