ಕೆ.ಪಿ.ಸಿ.ಸಿ ಸಂಘಟನಾ ಸೃಜನ್ ಅಭಿಯಾನ್ – 2 ಹಾವೇರಿ ಜಿಲ್ಲಾ ವೀಕ್ಷಕರಾಗಿ ಟಿ.ಎಂ. ಶಹೀದ್ ತೆಕ್ಕಿಲ್ ನೇಮಕ

News


ಹಾವೇರಿ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರನ್ನು ಬದಲಾಯಿಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಕೆ.ಪಿ.ಸಿ.ಸಿ.ಯ ಸಂಘಟನಾ ಸೃಜನ್ ಅಭಿಯಾನ್ 2 ಇದರ ಹಾವೇರಿ ಜಿಲ್ಲೆಯ ವೀಕ್ಷಕರಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ರವರು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಶಹೀದ್ ತೆಕ್ಕಿಲ್ ರವರನ್ನು ನೇಮಕಗೊಳಿಸಿರುತ್ತಾರೆ. ಕೆ.ಪಿ.ಸಿ.ಸಿ ವೀಕ್ಷಕರಾಗಿರುವ ಟಿ.ಎಂ ಶಹೀದ್ ತೆಕ್ಕಿಲ್ ರವರು ಪ್ರಸ್ತುತ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ (ಸಚಿವ ದರ್ಜೆ) ಸೇವೆ ಸಲ್ಲಿಸುತ್ತಿದ್ದು, ಇವರು ಸುಳ್ಯ ತಾಲೂಕು, ಜಿಲ್ಲಾ, ರಾಜ್ಯ ಎಸ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು, ಕೊಡಗು ಜಿಲ್ಲೆಯ ವಿರಾಜಪೇಟೆ ದ.ಕ ಜಿಲ್ಲೆಯ ಬೆಳ್ತಂಗಡಿ, ಹಾಸನ ಜಿಲ್ಲೆಯ ಅರಕಲಗೂಡು ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಕೆ.ಪಿ.ಸಿ.ಸಿ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿ, ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.ಎನ್ ಎಸ್ ಯು ಐ, ಯುವಕ ಕಾಂಗ್ರೆಸ್, ಅಲ್ಪಸಂಖ್ಯಾತರ ಕಾಂಗ್ರೆಸ್ಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಗಿ ಕಾರ್ಯದರ್ಶಿ ಕೆಪಿಸಿಸಿ ಕಾರ್ಯದರ್ಶಿಗಳಾಗಿ ಹಾಗೂ ಕೆಪಿಸಿಸಿ ಕಾರ್ಯದರ್ಶಿಯಾಗಿ ವಕ್ತಾರರಾಗಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆ ಮತ್ತು ಚುನಾವಣೆಯಲ್ಲಿ ಇಡೀ ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿರುವ ಶಾಹಿದ್ ಅವರು ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ, ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳ ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ ರಾಜಕೀಯ ಧಾರ್ಮಿಕ ಸಹಕಾರ, ಕ್ರೀಡಾ, ಕೃಷಿ ಉಧ್ಯಮ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ.

Leave a Reply

Your email address will not be published. Required fields are marked *