ನಮ್ಮ ಹಿರಿಯರ ಹೋರಾಟದ ಫಲವನ್ನು ನಾವು ಅನುಭವಿಸುತ್ತಿದ್ದೇವೆ – ಡಾ. ಜ್ಯೋತಿ ಆರ್ ಪ್ರಸಾದ್
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಎ.ಓ.ಎಲ್.ಇ (ರಿ) ಕಮಿಟಿ “ಬಿ” ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಧ್ವಜಾರೋಹಣ ಗೈದು ಮಾತನಾಡುತ್ತಾ ನಮ್ಮ ಹಿರಿಯರ ನಿರಂತರ ಹೋರಾಟದ ಫಲವಾಗಿ ಸಿಕ್ಕಿದ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಯುವಜನರು ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಬಡತನ ನಿರ್ಮೂಲನೆ, ಭ್ರಷ್ಟಾಚಾರ ನಿರ್ಮೂಲನ ಮುಂತಾದ ಕಾರ್ಯಗಳನ್ನು ಕೈಗೊಂಡು ಉತ್ತಮ ಪ್ರಜೆಗಳಾದಾಗ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು. ಆಡಳಿತ ಮಂಡಳಿ ಸದಸ್ಯರಾದ ಡಾ.ಅಭಿಜ್ಞಾ ಕೆ.ಆರ್ ಮತ್ತು ಮೌರ್ಯ ಆರ್. ಪ್ರಸಾದ್ ಉಪಸ್ಥಿತರಿದ್ದರು ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ಉಪಾಧ್ಯಕ್ಷೆ ಅಪೂರ್ವ ಸ್ವಾಗತಿಸಿ ಎನ್.ಎಸ್.ಎಸ್.ನಾಯಕ ಧನುಷ್ ವಂದಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಮಹಮದ್ ಮಸೂದ್ ಕಾರ್ಯಕ್ರಮ ನಿರ್ವಹಿಸಿದರು. ಎನ್.ಎಸ್.ಎಸ್.ನಾಯಕ ಕೀರ್ತನ್ ಬ್ಯಾಂಡ್ ನಿರ್ವಹಣೆ ಮಾಡಿದರು.