ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎನ್ಎಸ್ಎಸ್ ಘಟಕ 2ರ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್ ಎನ್. ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕ 1ರ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ನಾಯಕರಿಗೆ ಹಾಗೂ ಸ್ವಯಂಸೇವಕರಿಗೆ ಪ್ರಮಾಣವಚನ ಬೋಧಿಸಿದರು. ಘಟಕ ನಾಯಕರಾಗಿ ಕೀರ್ತನ್, ಧನುಷ್, ಗಾನವಿ ಹಾಗೂ ಜಾಹ್ನವಿ ಪ್ರಮಾಣವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಸೆಮೆಸ್ಟರ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಸಕ್ರಿಯ ಎನ್.ಎಸ್.ಎಸ್. ಸ್ವಯಂ ಸೇವಕರನ್ನು ಸನ್ಮಾನಿಸಲಾಯಿತು. ನಾಯಕರಾದ ಕೀರ್ತನ್ ಸ್ವಾಗತಿಸಿ ಜಾಹ್ನವಿ ವಂದಿಸಿದರು. ಚಲನ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು.
