ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸಾಂಪ್ರದಾಯಿಕ ಉಡುಗೆ ಹಾಗೂ ಸಾಂಸ್ಕೃತಿಕ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಸಮೂಹ ಗಾನ, ಸಮೂಹ ನೃತ್ಯ, ರಂಗೋಲಿ, ಬೆಂಕಿರಹಿತ ಅಡುಗೆ ಮುಂತಾದ ಸ್ಪರ್ಧೆಗಳು ಹಾಗೂ ಚಿತ್ರಕಲಾ ಪ್ರದರ್ಶನ ಮತ್ತು ತಾಂತ್ರಿಕ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಮತ್ತು ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಇವರ ನಿರ್ದೇಶನದಲ್ಲಿ ವಿದ್ಯಾರ್ಥಿ ಕ್ಷೆಮಾಧಿಕಾರಿಗಳಾದ ಪ್ರಭುಲಿಂಗ ಡಿ.ಎಚ್, ಪ್ರಜ್ಞಾ ಕೆ.ಆರ್, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕರಾದ ಶಾಲಿನಿ ಎಂ. ಎಸ್ ಮತ್ತು ಕವಿತಾ ಪಿ.ಡಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.


