ಮಂಗಳೂರು: ಮಂಗಳೂರಿನಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆ ಸಾಗುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಹಳೆಗೇಟು ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಚಾಲಕನ‌ ನಿಯಂತ್ರಣ ತಪ್ಪಿ  ಲಾರಿಯು ರಸ್ತೆಯ ಎಡಭಾಗದಲ್ಲಿದ್ದ ಸಣ್ಣ ಬರೆಗೆ ಡಿಕ್ಕಿ ಹೊಡೆದಿದೆ.

  • ಹಾನಿ: ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ಜಖಂಗೊಂಡಿದೆ.
  • ಪ್ರಾಣಾಪಾಯ: ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *