ದೇವರಕೊಲ್ಲಿಯ ಚಾಮುಂಡೇಶ್ವರಿ ದೇವಸ್ಥಾನದ ಸಮೀಪದ ತಿರುವಿನಲ್ಲಿ ಮಾರ್ಚ್ 9ರಂದು ಬೆಳಿಗ್ಗೆ ಕಂಟೈನರ್ ಲಾರಿ ಮತ್ತು ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಮುಂಡೇಶ್ವರಿ ದೇವಸ್ಥಾನದ ಬಳಿಯ ತಿರುವು ತಲುಪಿದಾಗ ಈ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯದತ್ತ ಬರುತ್ತಿದ್ದ ಸ್ವಿಫ್ಟ್ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ನೇರವಾಗಿ ಲಾರಿಯ ಹಿಂಬದಿಯ ಚಕ್ರಕ್ಕೆ ಅಪ್ಪಳಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿದೆ. ಅದರ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಗಾಯಾಳುಗಳನ್ನು ತಕ್ಷಣವೇ ಸಂಪಾಜೆ ತಾಜುದ್ದೀನ್ ಅವರ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *