​ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನೀಡಿದ 142 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಸಮೀರ್ ರಿಜ್ವಿ ಅವರ ಸ್ಫೋಟಕ ಬ್ಯಾಟಿಂಗ್ (ಅಜೇಯ 70 ರನ್) ನೆರವಿನಿಂದ ಇನ್ನೂ 17 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ, ಟಿ. ನಟರಾಜನ್ ಮತ್ತು ಲುಂಗಿ ಎನ್ಗಿಡಿ ಅವರ ಮಾರಕ ದಾಳಿಗೆ ಸಿಲುಕಿ ಕೇವಲ 141 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಅಮೋಘ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

Leave a Reply

Your email address will not be published. Required fields are marked *