Nammasullia:ಸೆ.01: ಗಣಪತಿ ವಿಸರ್ಜನೆ ವೇಳೆ ಡಿಸೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದಂದು ಜೊತ್ತನಪುರ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆಗಿದೆ.