ಮಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸ್ಥಾನಮಾನ ಹೊಂದಿರುವ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ಮಂಗಳೂರಿನಲ್ಲಿರುವ ಕಾರ್ಮಿಕ ಭವನಕ್ಕೆ ಭೇಟಿ ನೀಡಿ, ಇಲಾಖಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸುದೀರ್ಘ ಚರ್ಚೆ ನಡೆಸಿದ ಅವರು, ಜಿಲ್ಲೆಯಲ್ಲಿ ಎಲ್ಲಾ ವಲಯದ ಕಾರ್ಮಿಕರಿಗೂ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ಕಡ್ಡಾಯವಾಗಿ ಪಾವತಿಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು. ಶ್ರಮಿಕ ವರ್ಗಕ್ಕೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಎಚ್ಚರವಹಿಸಲು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಮಿಕರ ಆರೋಗ್ಯ, ಉದ್ಯೋಗ ಭದ್ರತೆ ಮತ್ತು ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಜಾರಿಯ ಕುರಿತು ಅಧಿಕಾರಿಗಳೊಂದಿಗೆ ಅವರು ಸಮಗ್ರವಾಗಿ ವಿಚಾರ ವಿನಿಮಯ ಮಾಡಿಕೊಂಡರು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಇಲಾಖೆಯ ಪ್ರಗತಿ ವರದಿಯನ್ನು ಮಂಡಳಿಯ ಅಧ್ಯಕ್ಷರಿಗೆ ವಿವರಿಸಿದರು.

Leave a Reply

Your email address will not be published. Required fields are marked *