ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21, 2026ರ ಗುರುವಾರದಂದು ಸುಳ್ಯದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

  • 11 ಕೆ.ವಿ ತೊಡಿಕಾನ ಫೀಡರ್ ವ್ಯಾಪ್ತಿಯ ಪ್ರದೇಶಗಳು
  • 11 ಕೆ.ವಿ ಕಲ್ಲುಗುಂಡಿ ಫೀಡರ್ ವ್ಯಾಪ್ತಿಯ ಪ್ರದೇಶಗಳು
    ವ್ಯತ್ಯಯದ ಸಮಯ: ಬೆಳಿಗ್ಗೆ 9:30 ರಿಂದ ಸಾಯಂಕಾಲ 5:30 ರ ತನಕ.
    ಈ ತುರ್ತು ನಿರ್ವಹಣಾ ಕಾಮಗಾರಿಯ ಸಮಯದಲ್ಲಿ ಗ್ರಾಹಕರು ಮೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *